ಚೆನ್ನೈ: ಎರಡು ವರ್ಷಗಳ ನಂತರ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತಿರುವ ಧೋನಿ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆಯಾಗಲಿದೆ ಎಂದು ಕೋಚ್ ಸ್ಟೀಫನ್ ಫ್ಲೆಮಿಂಗ್ ಸುಳಿವು ನೀಡಿದ್ದಾರೆ.ಟೀಂ ಇಂಡಿಯಾದಲ್ಲಿ ಕೆಳ ಕ್ರಮಾಂಕದಲ್ಲಿ ಆಡಲಿಳಿಯುವ ಧೋನಿ ಇದರಿಂದಾಗಿ ದೊಡ್ಡ ಇನಿಂಗ್ಸ್ ಆಡುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅಭಿಮಾನಿಗಳೂ ನಿರಾಶರಾಗಿದ್ದರು. ಆದರೆ ಧೋನಿ ತಮ್ಮ ವೃತ್ತಿ ಜೀವನದ ಆರಂಭದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯುತ್ತಿದ್ದರು. ಆ ಸಂದರ್ಭದಲ್ಲಿ ಧೋನಿ ಸಿಡಿಲಿನ ಹೊಡೆತವನ್ನು