ಬೆಂಗಳೂರು: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ.ದೇವಿ ಪ್ರಸಾದ್ ಶೆಟ್ಟಿ ಬಳಿ ಹೃದಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳಾಗಿತ್ತು. ಈ ಬಗ್ಗೆ ನಾರಾಯಣ ಹೃದಯಾಲಯ ಆಸ್ಪತ್ರೆ ಸ್ಪಷ್ಟನೆ ನೀಡಿದೆ.ಗಂಗೂಲಿ ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿದ್ದರು. ಅದಾದ ಬಳಿಕ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿದ್ದರು. ಈ ಹಿನ್ನಲೆಯಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆಗೆ ಬೆಂಗಳೂರಿಗೆ ಬಂದಿದ್ದಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳಾಗಿತ್ತು.ಈ ಬಗ್ಗೆ ನಾರಾಯಣ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ‘ಗಂಗೂಲಿ ಆಸ್ಪತ್ರೆಗೆ