ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ತೃತೀಯ ಟಿ20 ಪಂದ್ಯ ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳೂ ಒಂದೊಂದು ಪಂದ್ಯ ಗೆದ್ದಿದೆ. ಕಳೆದ ಪಂದ್ಯದಲ್ಲಿ ಗೆದ್ದ ಉತ್ಸಾಹದಲ್ಲಿ ಟೀಂ ಇಂಡಿಯಾ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಹಾಗಿದ್ದರೂ ಪ್ರತೀ ಪಂದ್ಯದಲ್ಲಿ ಟೀಂ ಇಂಡಿಯಾ ಗಮನಾರ್ಹ ಬದಲಾವಣೆಯೊಂದಿಗೇ ಕಣಕ್ಕಿಳಿಯುತ್ತಿದೆ. ಕಳೆದ ಪಂದ್ಯದಲ್ಲಿ ಇಶಾನ್ ಕಿಶಾನ್ ಮತ್ತು ಸೂರ್ಯಕುಮಾರ್ ಯಾದವ್ ಪದಾರ್ಪಣೆ ಮಾಡಿದ್ದರು. ಈ ಪೈಕಿ ಇಶಾನ್ ಸಿಕ್ಕ ಅವಕಾಶವನ್ನು