ಮುಂಬೈ: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ಟೀಂ ಇಂಡಿಯಾ ಆಟಗಾರರನ್ನು ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ.ಆದರೆ ಈ ತಂಡದಿಂದ ಪ್ರಮುಖ ಆಟಗಾರ ಕೆಎಲ್ ರಾಹುಲ್ ರನ್ನು ಕೈ ಬಿಟ್ಟಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಹುಲ್ ಕಳೆದ ಏಕದಿನ ವಿಶ್ವಕಪ್ ನಲ್ಲಿ ಆಪತ್ಬಾಂಧವನಂತೆ ಆಡಿದ್ದರು. ಇತ್ತೀಚೆಗೆ ಅವರು ತಂಡ ಸಂಕಷ್ಟದಲ್ಲಿದ್ದಾಗಲೆಲ್ಲಾ ಸಹಾಯಕ್ಕೆ ಬರುತ್ತಿದ್ದಾರೆ.ಹಾಗಿದ್ದರೂ ಅವರನ್ನು ತಂಡದಿಂದ ಹೊರಗಿಟ್ಟಿದ್ದೇಕೆ? ಈ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್