ಮುಂಬೈ: ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತವನ್ನು ಸೆಮಿಫೈನಲ್ ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.ಪಾಕಿಸ್ತಾನ ವಿರುದ್ಧ ಅರ್ಧಶತಕ ಸಿಡಿಸಿ ತಂಡಕ್ಕೆ ಆಧಾರವಾದ ಮಿಥಾಲಿ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ದಾಖಲೆ ಮಾಡಿದ್ದರು. ಅವರು ಟಿ20 ಕ್ರಿಕೆಟ್ ರನ್ ಗಳಿಕೆಯಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನೂ ಹಿಂದಿಕ್ಕಿರುವುದು ವಿಶೇಷ.