ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಕುಸಿತ ಕಂಡಿದೆ. ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿ ಸಂಕಷ್ಟದಲ್ಲಿದೆ. ಮೊದಲ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 578 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ ಈ ಮೊತ್ತವನ್ನು ಬೆನ್ನತ್ತುವ ಹಾದಿಯಲ್ಲಿ ಟೀಂ ಇಂಡಿಯಾ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಬಂದಿದೆ. ಪ್ರಮುಖರೆಲ್ಲರೂ ಪೆವಿಲಿಯನ್ ಸೇರಿಯಾಗಿದೆ.