ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ಕೆಳಗಿಳಿಯಲಿರುವ ರವಿಶಾಸ್ತ್ರಿ ಸ್ಥಾನಕ್ಕೆ ಹೊಸ ಕೋಚ್ ನೇಮಿಸಲು ಬಿಸಿಸಿಐ ಈಗಾಗಲೇ ತಯಾರಿ ಮಾಡಿಕೊಂಡಿದೆ. ಮಾಜಿ ಕೋಚ್ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್ ಹೆಸರು ಚಾಲ್ತಿಯಲ್ಲಿದೆ. ಈ ಇಬ್ಬರು ದಿಗ್ಗಜ ಕ್ರಿಕೆಟಿಗರಿಗೆ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಸ್ವತಃ ಸೌರವ್ ಗಂಗೂಲಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಆದರೆ ಈಗಾಗಲೇ ಒಮ್ಮೆ ಟೀಂ ಇಂಡಿಯಾ ಕೋಚ್ ಆಗಿ ಹೊಂದಾಣಿಕೆ ಕೊರತೆಯಿಂದ ರಾಜೀನಾಮೆ ನೀಡಿದ್ದ