ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಸಂಘಟನೆಯಿಂದ ಪ್ರಾಣ ಬೆದರಿಕೆ

ನವದೆಹಲಿ| Krishnaveni K| Last Modified ಬುಧವಾರ, 24 ನವೆಂಬರ್ 2021 (10:58 IST)
ನವದೆಹಲಿ: ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಐಸಿಸ್ ಕಾಶ್ಮೀರ ಸಂಘಟನೆಯಿಂದ ಪ್ರಾಣ ಬೆದರಿಕೆ ಬಂದಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

ಗೌತಮ್ ಗಂಭೀರ್ ಸದಾ ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಕಿಡಿ ಕಾರುತ್ತಲೇ ಇರುತ್ತಾರೆ. ಇದೀಗ ತಮಗೆ ಐಸಿಸ್ ಕಾಶ್ಮೀರ ಎಂಬ ಸಂಘಟನೆಯಿಂದ ಪ್ರಾಣ ಬೆದರಿಕೆ ಬಂದಿದೆ ಎಂದು ಗಂಭೀರ್ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.


ಮುನ್ನೆಚ್ಚರಿಕೆ ಕ್ರಮವಾಗಿ ಗಂಭೀರ್ ಅವರ ದೆಹಲಿ ನಿವಾಸದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಈಮೇಲ್ ಮೂಲಕ ಬೆದರಿಕೆ ಬಂದಿದ್ದು, ಇದರ ಜಾಡು ಹಿಡಿದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :