ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾದಲ್ಲಿ ಯಾರೆಲ್ಲಾ ಇರಬಹುದು ಎಂಬ ಕುತೂಹಲ ಹೆಚ್ಚಾಗಿದೆ.ಈ ನಡುವೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಕಳಪೆ ಪ್ರದರ್ಶನ ನೀಡಿದ್ದರು. ಅಲ್ಲದೆ, ಅವರೀಗ ಪೂರ್ಣಪ್ರಮಾಣದಲ್ಲಿ ಬೌಲಿಂಗ್ ಮಾಡಲೂ ಆರೋಗ್ಯ ಸಾಥ್ ಕೊಡುತ್ತಿಲ್ಲ.ಹೀಗಾಗಿ ಪಾಂಡ್ಯಗೆ ಕೊಕ್ ನೀಡುವ ಸಾಧ್ಯತೆಯೇ ಹೆಚ್ಚು