ನವದೆಹಲಿ: ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೀರೋ ಆಗಿದ್ದ ಕ್ರಿಕೆಟಿಗ ಮೊಹಮ್ಮದ್ ಶಮಿ ಇದೀಗ ಜೀವನದಲ್ಲೂ ಒಬ್ಬರ ಜೀವವುಳಿಸಿ ಹೀರೋ ಆಗಿದ್ದಾರೆ.ನಾನಿತಾಲ್ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಪ್ರಪಾತಕ್ಕೆ ಬಿದ್ದ ಕಾರಿನಲ್ಲಿ ಸಿಲುಕಿಕೊಂಡ ವ್ಯಕ್ತಿಯನ್ನು ಮೊಹಮ್ಮದ್ ಶಮಿ ಮತ್ತು ಗೆಳೆಯರು ರಕ್ಷಿಸಿದ್ದಾರೆ. ಈ ವಿಡಿಯೋವನ್ನು ಸ್ವತಃ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದರು.ಮೊಹಮ್ಮದ್ ಶಮಿಯ ಈ ಮಾನವೀಯತೆಯ ಗುಣಕ್ಕೆ ನೆಟ್ಟಿಗರು ಫಿದಾ ಆಗಿದ್ದು, ಒಬ್ಬರ ಜೀವವುಳಿಸಿದ್ದಕ್ಕೆ ಅಭಿನಂದಿಸುತ್ತಿದ್ದಾರೆ. ಅಷ್ಟಕ್ಕೂ ಶಮಿಗೆ ಪ್ರಪಾತಕ್ಕೆ