ದುಬೈ: ಟೀಂ ಇಂಡಿಯಾ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧ ಆಡಿದ್ದ ಮೂರು ಟೆಸ್ಟ್ ಪಂದ್ಯಗಳಲ್ಲಿ ಪಿಚ್ ಫಿಕ್ಸಿಂಗ್ ನಡೆದಿತ್ತು ಎಂದು ಆರೋಪಿಸಿದ್ದ ದುಬೈ ಮೂಲದ ಅಲ್ ಜಜೀರಾ ಟಿವಿ ವಾಹಿನಿಗೆ ಸಾಕ್ಷ್ಯ ಒದಗಿಸುವಂತೆ ಐಸಿಸಿ ಕರೆ ನೀಡಿದೆ.ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸುತ್ತೇವೆ. ಯಾರೇ ಆಗಿರಲಿ, ತಪ್ಪಿತಸ್ಥರು ಎಂದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಆದರೆ ಇದಕ್ಕೆ ಪೂರಕವಾದ ಸಾಕ್ಷ್ಯ ನಮಗೆ ಬೇಕು. ಅದನ್ನು ಅಲ್