ದುಬೈ: ಐಸಿಸಿ ಇತ್ತೀಚೆಗಿನ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂ.1 ಮತ್ತು ನಂ.2 ಸ್ಥಾನದಲ್ಲಿ ಮುಂದುವರಿದಿದ್ದಾರೆ.ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಇಬ್ಬರೂ ಕ್ರಮವಾಗಿ ಒಂದು ಮತ್ತು ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಮೂರನೇ ಸ್ಥಾನ ಪಾಕಿಸ್ತಾನದ ಬಾಬರ್ ಅಜಮ್ ಪಾಲಾಗಿದೆ.ಬೌಲರ್ ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ನಂ.1 ಸ್ಥಾನದಲ್ಲಿದ್ದಾರೆ.