ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಗೆ ಇಂದಿನಿಂದ ಚಾಲನೆ ಸಿಗಲಿದೆ. ಇಂದು ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.ಇದೇ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಕೂಟ ಆಯೋಜಿಸುತ್ತಿದೆ. 10 ತಂಡಗಳು ಕೂಟದಲ್ಲಿ ಭಾಗಿಯಾಗುತ್ತಿವೆ. ನವಂಬರ್ 19 ರಂದು ಅಹಮ್ಮದಾಬಾದ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.ಇಂದು ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್-ನ್ಯೂಜಿಲೆಂಡ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯ ಗೆದ್ದ ತಂಡ 33 ಕೋಟಿ ರೂ.