ದುಬೈ: ಕೊರೋನಾವೈರಸ್ ನಿಂದಾಗಿ ಈ ಬಾರಿ ಐಸಿಸಿ ಟಿ20 ವಿಶ್ವಕಪ್ ನಡೆಯುತ್ತದೋ ಇಲ್ಲವೋ ಎಂಬ ಅನುಮಾನಗಳ ನಡುವೆಯೇ ಐಸಿಸಿ ತೆರೆಮರೆಯಲ್ಲೇ ತಯಾರಿ ನಡೆಸುತ್ತಿದೆ. ಅಕ್ಟೋಬರ್ ಮತ್ತು ನವಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಬೇಕಿದೆ. ಕೊರೋನಾ ಪರಿಸ್ಥಿತಿ ಹೀಗೇ ಮುಂದುವರಿದರೆ ಕ್ರಿಕೆಟ್ ಕೂಟ ಆಯೋಜನೆ ಕಷ್ಟ.ಇದರ ನಡುವೆಯೇ ಅಕ್ಟೋಬರ್ ವೇಳೆಗೆ ಪರಿಸ್ಥಿತಿ ಸುಧಾರಿಸಬಹುದು ಎಂಬ ವಿಶ್ವಾಸದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ಜತೆಗೆ ಐಸಿಸಿ ವಿಶ್ವಕಪ್ ಗೆ ತಯಾರಿ ನಡೆಸುತ್ತಿದೆ. ಆರು