ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಮತ್ತು ದಿಗ್ಗಜ ಓಪನರ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಅಂತರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಈಗ ದೊಡ್ಡ ಚರ್ಚೆ ಶುರುವಾಗಿದೆ. ಇಂಗ್ಲೆಂಡ್ ವಿರುದ್ಧ ಭಾನುವಾರ (ಜುಲೈ 19, 2026) ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ಹಿಟ್ಮ್ಯಾನ್ ಕರಿಯರ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಲಿದೆಯೇ? ಎಂದು ಸದ್ಯ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆತಂಕ ಮತ್ತು ಕುತೂಹಲದಿಂದ