Widgets Magazine

ಭಾರತ-ಆಸ್ಟ್ರೇಲಿಯಾ ಏಕದಿನ: ಟಾಸ್ ಗೆದ್ದ ಆಸೀಸ್

ಮುಂಬೈ| Krishnaveni K| Last Modified ಮಂಗಳವಾರ, 14 ಜನವರಿ 2020 (13:04 IST)
ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

 
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಎದುರಾಗುತ್ತಿವೆ. ಆಸ್ಟ್ರೇಲಿಯಾವೂ ಕಠಿಣ ಎದುರಾಳಿಯಾಗಿರುವುದರಿಂದ ಈ ಪಂದ್ಯದಲ್ಲಿ ಪೈಪೋಟಿ ನಿರೀಕ್ಷಿಸಬಹುದು.
 
ಈ ಪಂದ್ಯದಲ್ಲಿ ಭಾರತದ ಪರ ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಇಬ್ಬರೂ ನಿರೀಕ್ಷೆಯಂತೆಯೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಆಡುವ ನಿರೀಕ್ಷೆಯಿದೆ.




ಇದರಲ್ಲಿ ಇನ್ನಷ್ಟು ಓದಿ :