ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯಲಿದೆ. ಮೊದಲ ಏಕದಿನ ಪಂದ್ಯ ಸೋತಿರುವ ಟೀಂ ಇಂಡಿಯಾಕ್ಕೆ ಸರಣಿ ಉಳಿಸಿಕೊಳ್ಳಲು ಇಂದಿನ ಪಂದ್ಯ ಗೆಲ್ಲಲೇಬೇಕಾಗಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತಕ್ಕೆ ಕಡಿವಾಣ ಹಾಕಲಾರದೇ ಟೀಂ ಇಂಡಿಯಾ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಭಾರತ ಗೆಲ್ಲಬೇಕಾದರೆ ಆಸ್ಟ್ರೇಲಿಯಾದ ಸಬಲ ಬ್ಯಾಟಿಂಗ್ ಗೆ ಕಡಿವಾಣ ಹಾಕಲೇಬೇಕು. ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಆಧಾರವಾಗಬೇಕಿರುವ ಶ್ರೇಯಸ್ ಐಯರ್, ಕೆಎಲ್ ರಾಹುಲ್ ರಿಂದ