ತಿರುವನಂತಪುರಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆಯಲಿದೆ.ಕಳೆದ ಪಂದ್ಯ ವಿಶಾಖಪಟ್ಟಣದಲ್ಲಿ ನಡೆದಿತ್ತು. ಈ ಪಂದ್ಯವನ್ನು ಟೀಂ ಇಂಡಿಯಾ ಕೊನೆಯ ಓವರ್ ನಲ್ಲಿ 2 ವಿಕೆಟ್ ಗಳಿಂದ ರೋಚಕವಾಗಿ ಗೆದ್ದುಕೊಂಡು ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಈ ಮೂಲಕ ವಿಶ್ವಕಪ್ ಫೈನಲ್ ನೋವಿಗೆ ಮುಲಾಮು ಹಚ್ಚುವ ಕೆಲಸ ಮಾಡಿತ್ತು.ಇಂದು ತಿರುವನಂತಪುರಂನಲ್ಲಿ ಎರಡನೇ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆ ಕಡಿಮೆ.