ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈಗಾಗಲೇ ಮೊದಲ ಪಂದ್ಯವನ್ನು ಆಘಾತಕಾರಿಯಾಗಿ ಸೋತಿರುವ ಟೀಂ ಇಂಡಿಯಾ ಈ ಪಂದ್ಯಕ್ಕೆ ಗಮನಾರ್ಹ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ. ಈಗಾಗಲೇ ಪಿತೃತ್ವ ರಜೆ ಪಡೆದಿರುವ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ತೊರೆದಿದ್ದಾರೆ. ಅವರ ಸ್ಥಾನದಲ್ಲಿ ಅಜಿಂಕ್ಯಾ ರೆಹಾನೆ ತಂಡವನ್ನು ಮುನ್ನಡೆಸಲಿದ್ದಾರೆ. ಇವರಲ್ಲದೆ ಆರಂಭಿಕ ಪೃಥ್ವಿ ಶಾ ತಂಡದಿಂದ ಹೊರಗುಳಿಯುವುದು ಬಹುತೇಕ ನಿಶ್ಚಿತವಾಗಿದೆ. ಕೊಹ್ಲಿ ಸ್ಥಾನಕ್ಕೆ ಕೆಎಲ್ ರಾಹುಲ್, ಶಾ