ಗುವಾಹಟಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಇಂದು ಗುವಾಹಟಿ ಮೈದಾನದಲ್ಲಿ ನಡೆಯಲಿದೆ.ಕಳೆದ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಹೊಂದಿದೆ. ಒಟ್ಟು ಐದು ಪಂದ್ಯಗಳ ಸರಣಿ ಇದಾಗಿದ್ದು ಇಂದಿನ ಪಂದ್ಯವನ್ನೂ ಗೆದ್ದು ವಿಶ್ವಕಪ್ ಸೋಲಿಗೆ ಮುಲಾಮು ಹಚ್ಚುವ ತವಕದಲ್ಲಿ ಟೀಂ ಇಂಡಿಯಾವಿದೆ.ಕಳೆದ ಎರಡೂ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಪಡೆ ಬ್ಯಾಟಿಂಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ವಿಶೇಷವಾಗಿ ಅಗ್ರಕ್ರಮಾಂಕ