ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.ರಾಜ್ ಕೋಟ್ ಮೈದಾನ ಬ್ಯಾಟಿಗರ ಸ್ವರ್ಗವಾಗಿದೆ. ಹೀಗಾಗಿ ಇಲ್ಲಿ ರನ್ ಹೊಳೆ ಹರಿಯುವ ನಿರೀಕ್ಷೆಯಿದೆ. ಈಗಾಗಲೇ ಟೀಂ ಇಂಡಿಯಾ ಬ್ಯಾಟಿಗರು ಪೈಪೋಟಿಗೆ ಬಿದ್ದಂತೆ ಬ್ಯಾಟಿಂಗ್ ಮಾಡಿ ರನ್ ಗಡ್ಡೆ ಹಾಕಿದ್ದಾರೆ. ಈ ಪಂದ್ಯದಲ್ಲೂ ದೊಡ್ಡ ಮೊತ್ತ ದಾಖಲಾಗುವ ನಿರೀಕ್ಷೆಯಿದೆ.ಭಾರತ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿರುವುದರಿಂದ ಇಂದಿನ