ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಹಗಲು ರಾತ್ರಿ ಪಂದ್ಯ ನಡೆಯುವುದು ಇದೀಗ ಪಕ್ಕಾ ಆಗಿದೆ. ಬಾಂಗ್ಲಾ ಕ್ರಿಕೆಟ್ ಮಂಡಳಿಯೂ ಇದಕ್ಕೆ ಹಸಿರು ನಿಶಾನೆ ತೋರಿದೆ.ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯ ಹಗಲು-ರಾತ್ರಿ ನಡೆಯಲಿದೆ. ಇದು ಭಾರತ ಆಡುವ ಮೊದಲ ಹಗಲು-ರಾತ್ರಿ ಟೆಸ್ಟ್ ಎಂಬ ದಾಖಲೆಗೆ ಪಾತ್ರವಾಗಲಿದೆ.ಟೆಸ್ಟ್ ಕ್ರಿಕೆಟ್ ಮೇಲೆ ಜನರ ಆಸಕ್ತಿ ಹೆಚ್ಚಿಸಲು ಹಗಲು-ರಾತ್ರಿ ಪಂದ್ಯ ಆಯೋಜಿಸಬೇಕು ಎಂದು ಬಿಸಿಸಿಐ