ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಎರಡನೇ ಏಕದಿನ ಪಂದ್ಯ ನಡೆಯಲಿದೆ.ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಎಲ್ಲಾ ವಿಭಾಗದಲ್ಲಿ ಪ್ರಚಂಡ ಪ್ರದರ್ಶನ ನೀಡಿದ್ದರು. ಅದರಲ್ಲೂ ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಮಿಂಚಿದರೆ ಹಳೆಯ ಆರಂಭಿಕ ಜೋಡಿ ರೋಹಿತ್ ಶರ್ಮಾ-ಶಿಖರ್ ಧವನ್ ಬ್ಯಾಟಿಂಗ್ ನಲ್ಲಿ ಮಿಂಚಿದ್ದರು.ಇಂಗ್ಲೆಂಡ್ ನ ಪಿಚ್ ಗಳಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸುತ್ತದೆ.