ನ್ಯಾಟಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ಸರಣಿ ಈಗಾಗಲೇ ಮುಕ್ತಾಯವಾಗಿದ್ದು, ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.ನ್ಯಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ವಿಶ್ವ ದಾಖಲೆಯ 481 ರನ್ ಸಿಡಿಸಿದ್ದು ಇದೇ ಮೈದಾನದಲ್ಲಿ. ಟಿ20 ಸರಣಿ ಗೆದ್ದ ಉತ್ಸಾಹದಲ್ಲಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕೈ ವಶ ಮಾಡಿಕೊಂಡು ಮುಂಬರುವ ವಿಶ್ವಕಪ್ ಗೆ ಭರ್ಜರಿ ತಯಾರಿ