ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಟ್ರೆಂಟ್ ಬ್ರಿಜ್ ನಲ್ಲಿ ನಡೆಯಲಿದೆ.ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಸರಣಿ ಇದಾಗಿದೆ. ಅಲ್ಲದೆ, ಕಳೆದ ಬಾರಿ ಇಂಗ್ಲೆಂಡ್ ಪ್ರವಾಸದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳಲು ಇದು ಸುಸಂದರ್ಭ. ಹೀಗಾಗಿ ಈ ಟೆಸ್ಟ್ ಸರಣಿ ಭಾರತಕ್ಕೆ ಮಹತ್ವದ್ದಾಗಿದೆ.ಭಾರತಕ್ಕೆ ಸರಣಿ ಆರಂಭಕ್ಕೂ ಮುನ್ನವೇ ಮಯಾಂಕ್ ಅಗರ್ವಾಲ್ ಗಾಯದ ರೂಪದಲ್ಲಿ ಆಘಾತ ಸಿಕ್ಕಿದೆ. ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್ ಗಳನ್ನು