ಭಾರತ-ಲಂಕಾ ಟಿ20 ಟೀಂ ಇಂಡಿಯಾ ಪಾಲು

ಇಂಧೋರ್| Krishnaveni K| Last Modified ಬುಧವಾರ, 8 ಜನವರಿ 2020 (08:53 IST)
ಇಂಧೋರ್: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

 
ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ಭಾರತೀಯ ಬೌಲರ್ ಗಳ ಸಂಘಟಿತ ಬೌಲಿಂಗ್ ಗೆ ತತ್ತರಿಸಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. 143 ರನ್ ಗಳ ಸುಲಭದ ಗುರಿ ಬೆನ್ನತ್ತಿದ್ದ ಭಾರತಕ್ಕೆ ಆರಂಭಿಕರು ಉತ್ತಮ ಆರಂಭ ಒದಗಿಸಿದರು.
 
ಕೆಎಲ್ ರಾಹುಲ್ 32 ಎಸೆತಗಳಲ್ಲಿ 45 ರನ್ ಗಳಿಸಿದರೆ ಶಿಖರ್ ಧವನ್ 29 ಎಸೆತಗಳಲ್ಲಿ 32 ರನ್ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ 26 ಎಸೆತಗಳಿಂದ 34 ರನ್ ಗಳಿಸಿ ಔಟಾದರೆ ನಾಯಕ ಕೊಹ್ಲಿ 17 ಎಸೆತಗಳಲ್ಲಿ ಅಜೇಯ 30 ರನ್ ಸಿಡಿಸಿದರು. ಭಾರತ 17.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ನಗೆ ಬೀರಿತು.
ಇದರಲ್ಲಿ ಇನ್ನಷ್ಟು ಓದಿ :