ಹ್ಯಾಮಿಲ್ಟನ್: ಟಿ20 ಸರಣಿಯಲ್ಲಿ ದಿಗ್ವಿಜಯ ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಳೆಯಿಂದ ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನ ಮುಂದುವರಿಸುವ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ನಾಳೆಯಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಹ್ಯಾಮಿಲ್ಟನ್ ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ಬೆಳಿಗ್ಗೆ 7.30 ಕ್ಕೆ ಆರಂಭವಾಗಲಿದ್ದು, ಬೆಳಿಗ್ಗೆಯೇ ಪಂದ್ಯ ನೋಡಲು ಸಿದ್ಧರಾಗಬಹುದು.ರೋಹಿತ್ ಶರ್ಮಾ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಅವರ ಸ್ಥಾನದಲ್ಲಿ ಯುವ ಕ್ರಿಕೆಟಿಗ ಪೃಥ್ವಿ ಶಾ