ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆಯಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಯಿಂದ ಹಿನ್ನಡೆ ಅನುಭವಿಸಿರುವ ಟೀಂ ಇಂಡಿಯಾ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇಂದಿನ ಪಂದ್ಯ ಡ್ರಾ ಮಾಡಿಕೊಂಡರೂ ಸರಣಿ ನ್ಯೂಜಿಲೆಂಡ್ ಪಾಲಾಗಲಿದೆ. ಒಂದೆಡೆ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಅಂಕ ಕಾಪಾಡಿಕೊಳ್ಳುವ ಒತ್ತಡವಾದರೆ, ಈಗಾಗಲೇ ಏಕದಿನ ಸರಣಿ ಸೋತಿರುವ ಕಾರಣ ಪ್ರತಿಷ್ಠೆ ಉಳಿಸಿಕೊಳ್ಳಲು ಈ ಪಂದ್ಯದಲ್ಲಿ ಗೆದ್ದು ಸರಣಿ ಉಳಿಸಿಕೊಳ್ಳುವ