Widgets Magazine

ಭಾರತ-ನ್ಯೂಜಿಲೆಂಡ್ ಟೆಸ್ಟ್ ನಾಳೆಯಿಂದ

ವೆಲ್ಲಿಂಗ್ಟನ್| Krishnaveni K| Last Modified ಗುರುವಾರ, 20 ಫೆಬ್ರವರಿ 2020 (09:13 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗುತ್ತಿದ್ದು ಮೊದಲ ಪಂದ್ಯ ವೆಲ್ಲಿಂಗ್ಟನ್ ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯಲಿದೆ.
 

ಈಗಾಗಲೇ ಟಿ20 ಸರಣಿ ಭಾರತ ಗೆದ್ದರೆ, ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಅವಮಾನ ಅನುಭವಿಸಿದೆ. ಹೀಗಾಗಿ ಟೆಸ್ಟ್ ಸರಣಿಯಲ್ಲಿ ಮತ್ತೆ ತನ್ನ ನಂ.1 ಸ್ಥಾನಕ್ಕೆ ತಕ್ಕ ಆಟವಾಡಿ ಪ್ರತಿಷ್ಠೆ ಉಳಿಸಿಕೊಳ್ಳುವ ಸಿದ್ಧತೆಯಲ್ಲಿದೆ.
 
ನಿನ್ನೆಯಿಂದ ಟೀಂ ಇಂಡಿಯಾ ಕಠಿಣ ಅಭ್ಯಾಸ ಆರಂಭಿಸಿದ್ದು, ಮೊದಲ ಟೆಸ್ಟ್ ಗೆ ಸಿದ್ಧವಾಗಿದೆ. ಬೌಲಿಂಗ್ ವಿಭಾಗದಲ್ಲಿ ಭಾರತ ಬಲಿಷ್ಠವಾಗಿದ್ದು, ಬ್ಯಾಟಿಂಗ್ ನಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಪೃಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಬೆಳಗಿನ ಜಾವ 4 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.
ಇದರಲ್ಲಿ ಇನ್ನಷ್ಟು ಓದಿ :