ದುಬೈ: ಟಿ20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಪಂದ್ಯವಾಡಲಿದ್ದು, ಇದಕ್ಕೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮಾಜಿ ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಪಂದ್ಯ ನಿಗದಿಯಂತೆ ನಡೆಯಬೇಕು ಎಂದಿದ್ದಾರೆ.‘ಕ್ರೀಡೆಗೆ ರಾಜಕೀಯ ಬೆರೆಸಬಾರದು ಎಂಬುದು ನಮ್ಮ ಅಭಿಪ್ರಾಯ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಡೆಯುತ್ತದೋ ಇಲ್ಲವೋ ಎಂದು ನಿರ್ಧರಿಸಲು ನಾನು ಯಾರೂ ಅಲ್ಲ.