ಮೊಹಾಲಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ಟಿ20 ಸರಣಿಯ ದ್ವಿತೀಯ ಪಂದ್ಯ ಇಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ ಮಳೆಯ ಕಾರಣದಿಂದ ಒಂದೂ ಎಸೆತ ಕಾಣದೇ ಪಂದ್ಯ ರದ್ದಾಗಿತ್ತು. ಹೀಗಾಗಿ ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಬೇಕಾದರೆ ಈಗ ಉಭಯ ತಂಡಗಳು ಎರಡೂ ಪಂದ್ಯಗಳನ್ನು ಗೆಲ್ಲಬೇಕಾದ ಅನಿವಾರ್ಯತೆಗೆ ಬಂದಿವೆ.ಮೇಲ್ನೋಟಕ್ಕೆ ಟೀಂ ಇಂಡಿಯಾವೇ ಬಲಿಷ್ಠವಾಗಿದೆ. ಅತ್ತ ದ.ಆಫ್ರಿಕಾದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ಯುವ