ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಅಂತಿಮ ಟಿ20 ಪಂದ್ಯಕ್ಕೆ ಮಳೆ ಕಾಟ ಎದುರಾಗಿದೆ.ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಅಪರೂಪಕ್ಕೆ ನಡೆಯುತ್ತಿರುವ ಪಂದ್ಯ ಇದಾಗಿದೆ. ಆದರೆ ವರುಣರಾಯ ಕಳೆದ ಎರಡು ದಿನಗಳಿಂದ ಇಲ್ಲಿ ಎಡೆಬಿಡದೇ ಸುರಿಯುತ್ತಿದ್ದು, ಇಂದೂ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದೆ.ಇದರಿಂದಾಗಿ ತಡವಾಗಿ ಆರಂಭವಾಗಿ 19 ಓವರ್ ಗೆ ಕಡಿತಗೊಂಡಿದ್ದ ಪಂದ್ಯ ಇದೀಗ ಮತ್ತೆ ಅರ್ಧಕ್ಕೆ ನಿಂತಿದೆ. ಇಂದೂ ಕೂಡಾ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆರಂಭಿಸಿ