ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ.ಪ್ರಮುಖರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮುಂತಾದ ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ.ಹೀಗಾಗಿ ಯುವ ಪ್ರತಿಭೆಗಳಿಗೆ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸಲು ವೇದಿಕೆ ಸಿಕ್ಕಂತಾಗಲಿದೆ. ಧವನ್ ಜೊತೆಗೆ ಶುಬ್ನಂ ಗಿಲ್ ತಂಡದ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಗಿಲ್ ಜಿಂಬಾಬ್ವೆ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್