ಪರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೂ ಇದು ನಿರ್ಣಾಯಕ ಪಂದ್ಯವಾಗಲಿದೆ. ಮೊದಲ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದುಕೊಂಡರೆ ಎರಡನೇ ಪಂದ್ಯದಲ್ಲಿ 8 ವಿಕೆಟ್ ಗಳ ಸೋಲು ಅನುಭವಿಸಿತ್ತು. ಹೀಗಾಗಿ ಇದೀಗ ಮೂರನೇ ಪಂದ್ಯ ನಿರ್ಣಾಯಕವಾಗಲಿದೆ.ಕಳೆದ ಎರಡು ಪಂದ್ಯಗಳನ್ನು ಗಮನಿಸಿದರೆ ಇಲ್ಲಿ ಟಾಸ್ ನಿರ್ಣಾಯಕವಾಗುತ್ತಿದೆ. ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ