ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟಿ20 ಸರಣಿ ಮುಗಿದ ಬೆನ್ನಲ್ಲೇ ಇಂದಿನಿಂದ ಏಕದಿನ ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಇಂದು ಚೆನ್ನೈನ ಚಿಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ.ಈಗಾಗಲೇ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾಗೆ ಏಕದಿನ ಸರಣಿಯನ್ನೂ ತನ್ನದಾಗಿಸಿಕೊಳ್ಳುವ ಉತ್ಸಾಹವಿದೆ. ಆದರೆ ಭುವನೇಶ್ವರ್ ಕುಮಾರ್ ಮತ್ತು ಶಿಖರ್ ಧವನ್ ಅನುಪಸ್ಥಿತಿ ತಂಡಕ್ಕೆ ಕಾಡಬಹುದು. ಹಾಗಿದ್ದರೂ ಇವರಿಬ್ಬರೂ ಆಟಗಾರರ ಸ್ಥಾನ ತುಂಬಬಲ್ಲವರು ಇರುವುದರಿಂದ ಇದು ದೊಡ್ಡ ಹೊಡೆತವನ್ನೇನೂ ನೀಡದು ಎನ್ನಬಹುದು.ಹಾಗಿದ್ದರೂ