ಮುಂಬೈ: ದೇಶದಲ್ಲಿ ಪ್ರಸ್ತುತ ಕೊರೋನಾ ಸಂಖ್ಯೆ ಹೆಚ್ಚಿರುವ ಕಾರಣ ಮುಂಬರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಮತ್ತು ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.ಮೂರು ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಯನ್ನು ಆರು ತಾಣಗಳಲ್ಲಿ ನಡೆಸಲು ಬಿಸಿಸಿಐ ಈ ಮೊದಲು ನಿರ್ಧರಿಸಿತ್ತು. ಆದರೆ ಈಗ ಕೊರೋನಾ ಪ್ರಕರಣಗಳು ಹೆಚ್ಚಾಗಿರುವುದರಿಂದ ಕೇವಲ ಎರಡೇ ತಾಣಗಳಲ್ಲಿ ಪಂದ್ಯ ನಡೆಸಲು ತೀರ್ಮಾನಿಸಿದೆ.ಹೀಗಾಗಿ ಕೋಲ್ಕೊತ್ತಾದ ಈಡನ್ ಗಾರ್ಡನ್ ನಲ್ಲಿ ಟಿ20 ಸರಣಿ ಮತ್ತು