ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ಏಕದಿನ ಪಂದ್ಯದಲ್ಲಿ ಭಾರತ ವನಿತೆಯರ ತಂಡ 2 ವಿಕೆಟ್ ಗಳಿಂದ ರೋಚಕವಾಗಿ ಪಂದ್ಯ ಗೆದ್ದುಕೊಂಡಿದೆ.ಈಗಾಗಲೇ ಎರಡು ಪಂದ್ಯದಲ್ಲಿ ಸೋತಿದ್ದ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಮೂರನೇ ಏಕದಿನ ಪಂದ್ಯವನ್ನು ಗೆದ್ದು ಬೀಗಿದೆ.ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಅಗ್ರ ಮೂರು ಕ್ರಮಾಂಕದ ಬ್ಯಾಟ್ಸ್