ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆಯಾಗುವುದು ಖಚಿತವಾಗಿದೆ.ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಇನಿಂಗ್ಸ್ ಅಂತರದಿಂದ ಹೀನಾಯವಾಗಿ ಸೋತಿತ್ತು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.ಆಫ್ರಿಕಾ ಪಿಚ್ ಗಳು ವೇಗಿಗಳಿಗೆ ಸಹಕಾರಿಯಾಗುವುದರಿಂದ ಇಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಹೆಚ್ಚು ಅನುಕೂಲವಾಗಲಿದೆ. ಕಳೆದ ಪಂದ್ಯದಲ್ಲಿ ಬೌಲರ್ ಗಳ ಪೈಕಿ ಜಸ್ಪ್ರೀತ್ ಬುಮ್ರಾ ಬಿಟ್ಟರೆ ಉಳಿದವರಿಂದ