ಲಕ್ನೋ: ಐಪಿಎಲ್ 2023 ರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಂತಾಗಿದೆ.ಈ ಆಟದಲ್ಲಿ ಬೌಲರ್ ಗಳದ್ದೇ ಮೇಲುಗೈ. ಬ್ಯಾಟಿಗರು ರನ್ ಗಳಿಸಲು ಪರದಾಡಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತು. ಫಾ ಡು ಪ್ಲೆಸಿಸ್ 44