ನವದೆಹಲಿ: ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಕೊನೆಗೂ ಮೊದಲ ಜಯ ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.ಮತ್ತೊಂದು ಕೊನೆಯ ಎಸೆತದ ಥ್ರಿಲ್ಲರ್ ಗೆಲುವು ಇದಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 19.4 ಓವರ್ ಗಳಲ್ಲಿ 172 ರನ್ ಗಳಿಗೆ ಆಲೌಟ್ ಆಯಿತು. ಡೇವಿಡ್ ವಾರ್ನರ್ 57, ಅಕ್ಸರ್ ಪಟೇಲ್ 54 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈಗೆ ಸ್ವತಃ ನಾಯಕ