ಲಂಡನ್: ಇಂಗ್ಲೆಂಡ್ ವಿರುದ್ಧ ಎರಡು ಟೆಸ್ಟ್ ಸೋತು ಹೀನಾಯ ಸ್ಥಿತಿಯಲ್ಲಿರುವ ಟೀಂ ಇಂಡಿಯಾಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಗಾಯದಿಂದಾಗಿ ಟಿ20, ಏಕದಿನ ಸರಣಿಯಿಂದ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ ಆಗಿದ್ದು ಮೂರನೇ ಟೆಸ್ಟ್ ವೇಳೆಗೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರ ಜತೆಗೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡಾ ಫಿಟ್ ಆಗಿದ್ದಾರೆ ಎಂದು ಟೀಂ ಇಂಡಿಯಾ ವೈದ್ಯಕೀಯ ತಂಡ ಘೋಷಿಸಿದೆ.ಆದರೆ ನಾಯಕ ವಿರಾಟ್ ಕೊಹ್ಲಿ ಫಿಟ್ನೆಸ್ ಬಗ್ಗೆ ಇನ್ನೂ ಸ್ಪಷ್ಟ