ಇಸ್ಲಾಮಾಬಾದ್: ವಿಶ್ವಕಪ್ ನಿಂದ ಪಾಕಿಸ್ತಾನವನ್ನು ಬಹಿಷ್ಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮನವಿ ಮಾಡಿದರೂ ಐಸಿಸಿ ಭಾರತದ ಮಾತಿಗೆ ಬೆಲೆ ಕೊಡಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಹೇಳಿದ್ದಾರೆ.ಪಾಕಿಸ್ತಾನದೊಂದಿಗೆ ಕ್ರಿಕೆಟ್ ಮಾತ್ರವಲ್ಲ, ಎಲ್ಲಾ ರೀತಿಯ ಕ್ರೀಡಾ ಸಂಬಂಧವನ್ನೂ ಕಡಿದುಕೊಳ್ಳಬೇಕು ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿಕೆಗೆ ತಿರುಗೇಟು ಕೊಟ್ಟ ಮಿಯಾಂದಾದ್ ಬಹುಶಃ ಗಂಗೂಲಿಗೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆಯಿರಬೇಕು ಎಂದು ಲೇವಡಿ ಮಾಡಿದ್ದಾರೆ.ಬಹುಶಃ ಗಂಗೂಲಿಗೆ ಚುನಾವಣೆಯಲ್ಲಿ