ಡುಬ್ಲಿನ್: ಟೀಂ ಇಂಡಿಯಾದಲ್ಲಿ ಪ್ರತಿಭೆಯಿದ್ದರೂ ಅವಕಾಶ ಸಿಗದೇ ಹತಾಶೆಗೊಳಗಾಗಿದ್ದ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ನಿನ್ನೆ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆ ನಿರಾಶೆಗಳನ್ನೆಲ್ಲಾ ಬ್ಯಾಟ್ ಮೂಲಕ ತೋರಿಸಿದರು.ಪರಿಣಾಮ ದ್ವಿತೀಯ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ 143 ರನ್ ಗಳಿಂದ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 213 ರನ್ ಗಳ ಬೃಹತ್ ಮೊತ್ತ