ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ಕೆಎಲ್ ರಾಹುಲ್ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ಸುಸ್ಥಿತಿಯಲ್ಲಿದೆ.ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ನಿನ್ನೆಯ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿದೆ. ಕೆಎಲ್ ರಾಹುಲ್ ಬಹಳ ದಿನಗಳ ನಂತರ ಟೆಸ್ಟ್ ತಂಡಕ್ಕೆ ಪುನರಾಗಮನವಾದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವುದಲ್ಲದೆ, ತಂಡಕ್ಕೂ ಆಧಾರವಾಗಿದ್ದಾರೆ. ಇದೀಗ ಅವರು 127 ರನ್