ಕೆಎಲ್ ರಾಹುಲ್ ಗೆ ಗಾಯ: ಟೆಸ್ಟ್ ತಂಡದಿಂದ ಔಟ್

ಮುಂಬೈ| Krishnaveni K| Last Modified ಮಂಗಳವಾರ, 23 ನವೆಂಬರ್ 2021 (16:37 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಸಿಕ್ಕಿದೆ.

ಟೀಂ ಇಂಡಿಯಾ ಪ್ರಮುಖ ಆಟಗಾರ ಕೆಎಲ್ ರಾಹುಲ್ ಸ್ನಾಯು ಸೆಳೆತಕ್ಕೊಳಗಾಗಿದ್ದು, ಟೆಸ್ಟ್ ತಂಡದಿಂದ ಹೊರಬಿದ್ದಿದ್ದಾರೆ. ಇದೀಗ ಅವರು ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡು ಫಿಟ್ನೆಸ್ ಮರಳಿ ಪಡೆಯಲಿದ್ದಾರೆ.


ರಾಹುಲ್ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಗೆ ಟೆಸ್ಟ್ ತಂಡಕ್ಕೆ ಕರೆ ನೀಡಲಾಗಿದೆ. ಗುರುವಾರದಿಂದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಭಾರತದ ಪರ ಮಯಾಂಕ್ ಅಗರ್ವಾಲ್ ಮತ್ತು ಶುಬ್ನಂ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಈ ಪಂದ್ಯದಲ್ಲಿ ರೋಹಿತ್, ಕೊಹ್ಲಿ ಇಬ್ಬರೂ ಆಡುತ್ತಿಲ್ಲ. ಅಜಿಂಕ್ಯಾ ರೆಹಾನೆ ತಂಡ ಮುನ್ನಡೆಸಲಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :