ಪರ್ತ್: ಕಳೆದ ಒಂದು ವರ್ಷದಿಂದ ಕಳಪೆ ಫಾರ್ಮ್ ನಲ್ಲಿದ್ದರೂ ನಿರಂತರವಾಗಿ ಅವಕಾಶ ಪಡೆಯುತ್ತಿರುವ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ಸಿಟ್ಟಿಗೆದ್ದಿದ್ದಾರೆ.ಈಗಾಗಲೇ ಕಳಪೆ ಫಾರ್ಮ್ ನಿಂದ ಸಾಕಷ್ಟು ಟ್ರೋಲ್ ಗೊಳಗಾಗಿರುವ ಕೆಎಲ್ ರಾಹುಲ್ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ 2 ರನ್ ಗೆ ಔಟಾದ ಬಳಿಕ ಅಭಿಮಾನಿಗಳ ಪಿತ್ತ ನೆತ್ತಿಗೇರಿದೆ. ಇನ್ನೂ ಈ ಆಟಗಾರನಿಗೆ ಯಾಕೆ ಅವಕಾಶ ಕೊಡಲಾಗುತ್ತಿದೆ. ಭಾರತದಲ್ಲಿ ಪ್ರತಿಭಾವಂತ ಕ್ರಿಕೆಟಿಗರಿಗೆ ಬರವೇ ಎಂಬ ಆಕ್ರೋಶ