ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಲಷ್ಟೇ ಶಕ್ತವಾಯಿತು. ಪಿಚ್ ಆರಂಭದಲ್ಲಿ ಬೌಲರ್ ಗಳಿಗೆ ಸಹಕಾರಿಯಾಗುತ್ತಿತ್ತು. ಇದರಿಂದಾಗಿ ಆಫ್ರಿಕಾ ರನ್ ಗಳಿಸಲು ತಿಣುಕಾಡಿತು.ಬಳಿಕ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು. ಬಳಿಕ ವಿರಾಟ್