Photo Courtesy: Twitterಮುಂಬೈ: ಮುಂದಿನ ತಿಂಗಳು ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಇದಕ್ಕಾಗಿ ರಾಹುಲ್ ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಜನವರಿ ಮೊದಲ ವಾರದಲ್ಲಿ ರಾಹುಲ್-ಅಥಿಯಾ ವಿವಾಹವಾಗಲಿದ್ದಾರೆ ಎನ್ನಲಾಗಿದೆ.ಇದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳೂ ನಡೆದಿವೆ. ಅಥಿಯಾ ತಂದೆ, ಬಾಲಿವುಡ್ ನಟ ಸುನಿಲ್ ಶೆಟ್ಟಿಯವರ ಮುಂಬೈನ ಬಂಗಲೆಯಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ.