ಮುಂಬೈ: ಕೊರೋನಾದಿಂದಾಗಿ ಕೊನೆಯ ಕ್ಷಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಬರುವ ದ.ಆಫ್ರಿಕಾ ಸರಣಿಯಲ್ಲೂ ಪಾಲ್ಗೊಳ್ಳುವುದು ಅನುಮಾನವಾಗಿದೆ.ಸೆಪ್ಟೆಂಬರ್ 28 ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಗೂ ಟೀಂ ಇಂಡಿಯಾ ಈಗಾಗಲೇ ಪ್ರಕಟವಾಗಿದೆ.ಆದರೆ ಮೊಹಮ್ಮದ್ ಶಮಿ ಇನ್ನೂ ಫಿಟ್ನೆಸ್ ಸಾಬೀತುಪಡಿಸಿಲ್ಲ. ಹೀಗಾಗಿ ದ.ಆಫ್ರಿಕಾ ಸರಣಿಯಲ್ಲೂ ಅವರು ಪಾಲ್ಗೊಳ್ಳುವುದು ಅನುಮಾನವಾಗಿದೆ.