ಬೆಂಗಳೂರು: ಈ ವಿಶ್ವಕಪ್ ನಲ್ಲಿ ಭಾರತ ತಂಡಕ್ಕೆ ಬೇರೆಯೇ ಬಾಲ್ ನೀಡಲಾಗುತ್ತಿದೆ ಎಂಬ ಪಾಕಿಸ್ತಾನದ ಹಸನ್ ರಾಜಾ ಆರೋಪಕ್ಕೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ತಪರಾಕಿ ನೀಡಿದ್ದಾರೆ.ಮಾಜಿ ಕ್ರಿಕೆಟಿಗ ಹಸನ್ ರಾಜಾ ಟಿವಿ ವಾಹಿನಿಯೊಂದರ ಚರ್ಚೆ ವೇಳೆ ಇಂತಹದ್ದೊಂದು ಆಧಾರರಹಿತ ಆರೋಪ ಮಾಡಿದ್ದರು. ಈ ಬಗ್ಗೆ ಸ್ವತಃ ಪಾಕಿಸ್ತಾನದವರೇ ಆದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ತರಾಟೆಗೆ ತೆಗೆದುಕೊಂಡಿದ್ದರು.ಇದೀಗ ಭಾರತೀಯ ವೇಗಿ ಮೊಹಮ್ಮದ್ ಶಮಿ ಇನ್ ಸ್ಟಾಗ್ರಾಂ ಮೂಲಕ